ಶಿವಮೊಗ್ಗ : 2020-21 ನೇ ಸಾಲಿನ ಜಿಲ್ಲಾ ಜಂಗಮ ಮಹಿಳಾ ಸಮಾವೇಶವನ್ನು ಗುರುವಾರದಂದು ವಿನೋಬನಗರದಲ್ಲಿರುವ ಶಿವಾಲಯದಲ್ಲಿ ಆಯೋಜನೆ ಮಾಡಲಾಗಿದೆ. ಸಮಾವೇಶದ ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜಂಗಮ ಮಹಿಳಾ ಸಮಾಜದ ಅಧ್ಯಕ್ಷೆ ಸುಜಯ ಪ್ರಸಾದ ವಹಿಸಿಕೊಳ್ಳಲಿದ್ದಾರೆ.
ಇನ್ನು ಇದೇ ವೇಳೆ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಪತ್ರಕರ್ತ ಸಂಘದ ಕಾರ್ಯದಶಿಯಾದ ಸೋಮನಾಥ ಹಾಗೂ ಹಿರಿಯ ಮಹಿಳೆ ಈರಮ್ಮ ಬಸಪ್ಪಯ ಅವರಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ಜಿಲ್ಲಾ ಜಂಗಮ ಸಮಾಜದಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.