ದೆಹಲಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಗೊಳ್ಳಲಿರುವ ಕಾರ್ಯಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿನಲ್ಲಿಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ಮಾಡಿದರು.
ಅಂದ್ಹಾಗೆ ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿಟಿ ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.