ಬಿಜೆಪಿ ಯುವ ಮೋರ್ಚಾದಿಂದ ನವಭಾರತ ಮೇಳಕ್ಕೆ ಚಾಲನೆ 

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಹಿನ್ನೆಲೆ ನಡೆಯುತ್ತಿರುವ ಸೇವೆ ಮತ್ತು ಸಮರ್ಪಣಾ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಇಂದಿನಿAದ ಮೂರು ದಿನಗಳ ಕಾಲ ನವಭಾರತ ಮೇಳ ಆಯೋಜಿಸಲಾಗಿದೆ.

ನಗರದ ವೀರಭದ್ರೇಶ್ವರ ಚಲನಚಿತ್ರ ಮಂದಿರದಲ್ಲಿ ಮೊದಲ ದಿನದ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್ ಉದ್ಘಾಟಿಸಿದ್ರು. ಮೇಳದಲ್ಲಿ ಖಾದಿ ಬಟ್ಟೆ, ಕೃಷಿ ಉತ್ಪನ್ನಗಳು, ಟೀ ಪುಡಿ ಸೇರಿದಂತೆ ಹಲವು ವಸ್ತುಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ವಿರೋಧ ಪಕ್ಷವಾದ ಕಾಂಗ್ರೆಸ್ ಕೇವಲ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ರು. ಸಾಫ್ಟ್ವೇರ್, ಆಟೋಮೊಬೈಲ್, ಸ್ಟಾರ್ಟ್ಅಪ್ ಮೂಲಕ ೧೫ ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ರಾಷ್ಟಿçÃಯ ಹೆದ್ದಾರಿ, ಕೈಗಾರಿಕೆ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಕೆಲಸಗಳನ್ನು ಮಾಡುತ್ತಿದೆ. ವಿಶ್ವವನ್ನೇ ಆಳುವ ಶಕ್ತಿಯನ್ನು ನಮ್ಮ ಹೆಮ್ಮೆಯ ಪ್ರಧಾನಿ ಹೊಂದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವು ಮುಖಂಡರು, ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ರು.