ಸಮಾಜಘಾತಕ ಶಕ್ತಿಗಳ ಮೇಲೆ ಡ್ರೋಣ್ ಕಣ್ಣು 

ಶಿವಮೊಗ್ಗ : ಶಾಂತಿ ಕದಡುವ ಸಮಾಜಘಾತಕ ಶಕ್ತಿಗಳ ಮೇಲೆ ನಿಗಾ ವಹಿಸಲು ಪೊಲೀಸ್ ಇಲಾಖೆ ದ್ರೋಣ್ ಕ್ಯಾಮರಾ ಬಳಕೆ ಮಾಡಲಾಗುತ್ತಿದೆ. ಉತ್ತರ ಕನ್ನಡ, ಮಂಡ್ಯ, ಕಾರ್ಕಳದಿಂದ ಪೊಲೀಸ್ ತಂಡಗಳು ಆಗಮಿಸಿದ್ದು, ಡ್ರೋಣ್ ಕ್ಯಾಮರಾಗಳ ಮೂಲಕ ಸೂಕ್ಷ್ಮ ಪ್ರದೇಶಗಳ ಮೇಲೆ ಹದ್ದಿನ ಕಣ್ಣು ಇಡಲಿದ್ದಾರೆ.

7 ಡ್ರೋಣ್ ಕ್ಯಾಮರಾ ಬಳಕೆ ಮಾಡಲಾಗುತ್ತಿದೆ. ಶಿವಮೊಗ್ಗ ನಗರದ ಅಶೋಕ ವೃತ್ತದಿಂದ ಡ್ರೋಣ್ ಕ್ಯಾಮರಾ ಹಾರಿಸಿ, ತಪಾಸಣೆ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ. ಸೆಲ್ವಮಣಿಯವರು ಭೇಟಿ ನೀಡಿ, ಈ ಕುರಿತು ಮಾಹಿತಿ ಪಡೆದುಕೊಂಡರು.