ರಿಪ್ಪನ್‌ಪೇಟೆ : ಒಂದೆಡೆ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಇನ್ನೊಂದೆಡೆ ಆನೆಗಳು ಬೆಳೆ ಹಾನಿ ಮಾಡಿಹೋದರು ಕೂಡ ಯಾವುದೇ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಪರಿಹಾರ ನೀಡುವ ಭರವಸೆ ಕೂಡ ನೀಡಿಲ್ಲ.
ಹೊಸನಗರ ತಾಲೂಕಿನ ರಿಪ್ಪನ್‌ಪೇಟಿ ಸಮೀಪದ ಕಳಸೆ, ತಳಲೆ, ಬೆಳ್ಳೂರು ಭಾಗದಲ್ಲಿ ಆನೆ ಹಾವಳಿಯಿಂದಾಗಿ ರೈತರು ದಿಕ್ಕೆಟ್ಟಿದ್ದಾರೆ. ಅರಣ್ಯ ಇಲಾಖೆ ಕಾರ್ಯಚರಣೆಯಿಂದಾಗಿ ಆನೆಗಳ ಹಾವಳಿ ಕಡಿಮೆಯೇನೋ ಆಗಿದೆ. ಆದ್ರೆ ರೈತರ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಅಡಿಕೆ, ಬಾಳೆ ಸೇರಿದಂತೆ ತೋಟಗಾರಿಕಾ ಬೆಳೆಗಳು ಕಾಡಾನೆಗಳ ಹಾವಳಿಗೆ ನಾಶವಾಗಿವೆ. ಇಷ್ಟಾದ್ರೂ ಕನಿಷ್ಠ ಸೌಜನ್ಯಕ್ಕಾದರೂ ಯಾವೊಬ್ಬ ಜನಪ್ರತಿನಿಧಿಯೂ ಸ್ಥಳಕ್ಕೆ ಭೇಟಿ, ರೈತರ ಸಂಕಷ್ಟಕ್ಕೆ ಸ್ಪಂದಿಸದೇ ಇರೋದು ದುರಂತವೇ ಸರಿ.