ಅಧಿಕಾರಿಗಳ ವಿರುದ್ಧ ಈಶ್ವರಪ್ಪ ಗರಂ

ಶಿವಮೊಗ್ಗ :  ಮುಗಿಯದೇ ಇರುವ ಕಾಮಗಾರಿಯ ಕೆಲಸ ಮುಗಿದಿದೆಯಂತ ಸರ್ಟಿಫಿಕೇಟ್ ಕೊಡೋದಕ್ಕೆ ನೀವು ಅಧಿಕಾರಿಗಳಾಗಿದ್ದೀರಾ? ಇದಕ್ಕೇನಾ ನಿಮ್ಮ ಅಪ್ಪ ಅಮ್ಮ ನಿಮ್ಮನ್ನ ಓದಿಸಿ ಅಧಿಕಾರಿಗಳನ್ನಾಗಿ ಮಾಡಿಸಿದ್ದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರದ ದುಡ್ಡು, ಜನಸಮಾನ್ಯರ ದುಡ್ಡಿನಲ್ಲಿ ಕೆಲಸವನ್ನು ಸಂಪೂರ್ಣವಾಗಿ ಮಾಡದೆ ಇದ್ರೆ ನಾವು ಏನು ಮಾಡಬೇಕೆಂದು ಪ್ರಶ್ನಿಸಿದರು. ಸಭೆಯಲ್ಲಿ ಸೊರಬ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಸಿಇಒ ವೈಶಾಲಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.