ಕೆಎಸ್‌ಈ ಅವರನ್ನ ಸಚಿವ ಸಂಪುಟದಿಂದ ಉಚ್ಛಾಟಿಸಬೇಕು 

ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನ ಸಚಿವ ಸಂಪುಟದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತು.

ಕೆ.ಎಸ್.ಈಶ್ವರಪ್ಪ ದೇಶದ ಐಕ್ಯತೆಗೆ ಧಕ್ಕೆ ತರುವಂತಹ, ಪ್ರಚೋದನಕಾರಿ ಹೇಳಿಕೆಗಳನ್ನ ನೀಡಿದ್ದಾರೆ. ಹಾಗೆಯೇ ಸದನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ್ದಾರೆ. ಹೀಗಾಗಿ ಈ ಕೂಡಲೇ ಈಶ್ವರಪ್ಪ ಅವರನ್ನ ಸಚಿವ ಸಂಪುಟದಿಂದ ಉಚ್ಛಾಟನೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.