ಮಂಗಳೂರು : ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಸೋವವಾರ ರಾಜ್ಯಧ ವಿವಿಧೆಡೆ ನಡೆದ ಕಾರ್ಯಕ್ರಮದಲ್ಲಿ 46 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹಾದು ಹೋಗುವ 218.93 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಷ್ಟ್ರೀಯ ಹೆದ್ದಾರಿ 766ರ ಆಯ್ದ ಭಾಗಗಳಲ್ಲಿನ 27.18 ಕಿ.ಮಿ ಉದ್ದದ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವರು ಭೂಮಿ ಪೂಜೆ ಸಲ್ಲಿಸಿದರು. ಹಾಗೂ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ 8.20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಭಟ್ರುಹಳ್ಳ, ಗೌರಿ ಹಕ್ಲಿ ಹಾಗೂ ಕೆಂಚಿನಹಳ್ಳ ಸೇತುವೆಗಳನ್ನು ಲೋಕಾರ್ಪಣೆಗೊಳಿಸಿದರು.