ಶಿವಮೊಗ್ಗ : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ೧೫೦೦೦ ಸಾವಿರ ಹುದ್ದೆಗಳ ನೇಮಕಾತಿಗೆ ಶನಿವಾರ ಹಾಗೂ ಭಾನುವಾರ ಪರೀಕ್ಷೆ ನಡೆಯಲಿದೆ. ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಒಂದು ಲಕ್ಷದ ಆರನೂರ ಎಂಬತ್ತ ಮೂರು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಈ ಸಂಬಂಧ ಶಿವಮೊಗ್ಗ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಶಿವಮೊಗ್ಗದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಭೇಟಿ ನೀಡಿದ್ದಾರೆ. ಇವರ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಕೂಡ ಭೇಟಿಕೊಟ್ಟಿದ್ದು, ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಸಿಇಒ ವೈಶಾಲಿ ಕೂಡ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ.