ಶಿವಮೊಗ್ಗದಲ್ಲಿ ಜ.೫ರಂದು ರಾಜ್ಯ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ

ಶಿವಮೊಗ್ಗ : ಜನವರಿ ೫ರಂದು ಶುಭಮಂಗಳ ಕಲ್ಯಾಣ ಮಂದಿರದಲ್ಲಿ ರಾಜ್ಯ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಕುರಿತಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಅಶೋಕ್ ಮೂರ್ತಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮಾಲತೇಶ್, ಜನವರಿ ೫ ರಂದು ನಡೆಯಲಿರುವ ರಾಜ್ಯ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆ, ಸಂಘಟನೆ ಹಾಗೂ ಈ ಕಾರ್ಯಕ್ರಮಕ್ಕೆ ಆಗಮಿಸುತ್ತುರವ ನಾಯಕರ ಕುರಿತಾಗಿ ಮಾಹಿತಿ ನೀಡಿದರು.