ರಾಮನಗರ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧವೂ ಕೂಡ ಪ್ರಕರಣ ದಾಖಲಾಗಿದೆ. ಜನವರಿ ೧೨ರಂದು ಕಿಮ್ಮನೆ ರತ್ನಾಕರ್ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರಿಂದ ರಾಮನಗರ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಸಂಕ್ರಾಮಿಕ ಕಾಯಿಲೆ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಂದ್ಹಾಗೆ ಪಾದಯಾತ್ರೆ ಮುನ್ನಡೆಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
.jpg)
.jpg)
.jpg)
.jpg)
.jpg)
.jpg)
