ಶಿವಮೊಗ್ಗ : ಪ್ರಚೋದನಕಾರಿ ಹೇಳಿಕೆ ನೀಡಿ ಶಿವಮೊಗ್ಗದ ಅಶಾಂತಿಗೆ ಕಾರಣವಾಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಿ ಅಂತ ದೊಡ್ಡಪೇಟೆ ಠಾಣೆಗೆ ಮನವಿ ಮಾಡಿಕೊಂಡಿದ್ರೂ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ಮೇ ೫ರ ಒಳಗೆ ವರದಿ ನೀಡುವಂತೆ ಸೂಚನೆ ನೀಡಿದ ಬೆನ್ನಲ್ಲೇ ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ದೇಶದ್ಯಾಂತ ತೀವ್ರ ಚರ್ಚೆಗೆ ಕಾರಣವಾಗಿತ್ತು. ಕೊಲೆ ನಂತರ ನಡೆದ ಗಲಭೆಯೂ ಕೂಡ ರಾಜಕೀಯ ಹಾಗೂ ಕೂಮು ಸಂಘರ್ಷಕ್ಕೆ ಕಾರಣವಾಗಿತ್ತು. ಶಿವಮೊಗ್ಗ ಪೀಸ್ ಆರ್ಗನೈಸೇಷನ್‌ನ ರಿಯಾಜ್ ಅಹಮ್ಮದ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದೆ ತನಿಖೆ ಯಾವ ರೀತಿ ನಡೆಯುತ್ತೆ ಅನ್ನೋದು ಕುತೂಹಲ ಕೆರಳಿಸಿದೆ.
ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲು
