ವಿಶ್ವ ಮಹಿಳಾ ದಿನಾಚರಣೆ ಆಚರಿಸಿದ ಎಫ್‌ಪಿಎಐ 

ಶಿವಮೊಗ್ಗ : ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಬಿ.ಹೆಚ್.ರಸ್ತೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಿಲಾಗಿದೆ.

ಕಾರ್ಯಕ್ರಮದಲ್ಲಿ ಜಂಡರ್ ಇಕ್ವಾಲಿಟಿ ಟುಡೆ ಫಾರ್ ಎ ಸಬ್‌ಸ್ಟೆನ್ಷಲ್ ಟುಮಾರೋ ಎಂಬ ವಿಷಯದ ಕುರಿತಾಗಿ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ರಾಷ್ಟ್ರೀಯ ಪ್ರಶಸ್ತಿ ವಿಜೇತ ಶಿಕ್ಷಕಿ ಹೆಚ್.ವಿಶಾಲಾಕ್ಷಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಈ ವಿಷಯದ ಕುರಿತು ಉಪನ್ಯಾಸ ನೀಡಿದರು. ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಎಸ್.ಬಿ. ಅಶೋಕ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.