ಶಿವಮೊಗ್ಗ : ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಕರಾಟೆ ತರಬೇತಿ ಹಾಗೂ ಬೇಸಿಗೆ ಶಿಬಿರವನ್ನು ಎ ಝಡ್ ಮಾರ್ಷಲ್ ಆರ್ಟ್ ವತಿಯಿಂದ ಆಯೋಜನೆ ಮಾಡಲಾಗಿದೆ.
ಎ ಝಡ್ ಅಕಾಡೆಮೆ ಸಂಸ್ಥಾಪಕ ಡಾ.ಶಿಹಾನ್ ಎ ಝಡ್ ಮುಹೀದ್ ಕಳೆದ 24 ವರ್ಷದಿಂದ ಬಡ ಹಾಗೂ ಅನಾಥ ಮಕ್ಕಳಿಗೆ ಉಚಿತ ಕರಾಟೆ ತರಬೇತಿ ನೀಡುತ್ತಿದ್ದಾರೆ. ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಆ ಮಕ್ಕಳು ಭಾಗವಹಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಕರಾಟೆ ತರಬೇತಿ ನೀಡಲಾಗುತ್ತಿದೆ. ಈ ಬಾರಿಯೂ ಕೂಡ ಏಪ್ರಿಲ್ 15ರಿಂದ ಮೇ 15ರವರೆಗೆ ಉಚಿತ ಬೇಸಿಗೆ ಶಿಬಿರ ಹಾಗೂ ಕರಾಟೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಎ ಝಡ್ ಅಕಾಡೆಮಿಯಿಂದ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.