ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ 

ಶಿವಮೊಗ್ಗ : ಶರಾವತಿನಗರ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ 24ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಹಾಗೇನೆ ಇದೇ ವೇಳೆ ವಿವಾಹವಾಗಿ 50 ವರ್ಷ ಪೂರೈಸಿದ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಿತು.

ಇನ್ನೂ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭದ ಸಭಾ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆಯ ಶ್ರೀ ಪ್ರಸನ್ನನಾಥ ಸ್ವಾಮೀಜಿ ವಹಿಸಿಕೊಂಡಿದ್ದರು.