ಶಿವಮೊಗ್ಗ : ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಧಾರಗಳಲ್ಲಿ ಒಂದಾಗಿದ್ದ ಮೊಬೈಲ್ ಕೊನಗೂ ಸಿಕ್ಕಿದೆ. ಈ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಕರಣದಲ್ಲಿ ಆರೋಪಿಯಾಗಿರುವ ಕೆಲವರ ವಿರುದ್ಧ ಕ್ರಿಮಿನಲ್ ಕೇಸ್‌ಗಳು ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ ಅನ್ನೋದರ ಕುರಿತಾಗಿಯೂ ತನಿಖೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಹಾಗೆಯೇ ಶಿವಮೊಗ್ಗ ಎಸ್‌ಪಿ ವರ್ಗಾವಣೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿರುವ ಸುದ್ಧಿ ಸುಳ್ಳು ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳಿದೆದಿದ್ದಾರೆ