ಈ ಬಾರಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಕೆಲವೊಂದು ತಾಲೂಕುಗಳನ್ನು ಸೇರಿಸದ ಹಿನ್ನೆಲೆ ಭಾರೀ ವಿರೋಧ ಕೇಳಿ ಬಂದಿತ್ತು.
ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ, ಮತ್ತೆ 10 ಜಿಲ್ಲೆಗಳ 25 ತಾಲೂಕುಗಳನ್ನು ಅತಿವೃಷ್ಟಿ ಮತ್ತು ಪ್ರವಾಹಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಿ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಶಿವಮೊಗ್ಗ ತಾಲೂಕಿನ ಭದ್ರಾವತಿ, ತೀರ್ಥಹಳ್ಳಿ ಮತ್ತು ಹಸನಗರ ತಾಲೂಕುಗಳನ್ನೂ ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
ಮಲೆನಾಡಿನಲ್ಲಿ ಸತತವಾಗಿ ಸುರಿದ ಭಾರೀ ಮಳೆಯಿಂದ ಈ ತಾಲೂಕುಗಳಲ್ಲಿ ಅತಿವೃಷ್ಟಿ ಸಂಭವಿಸಿದೆ. ಆದರೆ ಸರ್ಕಾರ ಈ ತಾಲೂಕುಗಳನ್ನು ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಸರ್ಕಾರ ತನ್ನ ಆದೇಶ ಪರಿಷ್ಕರಿಸಿ ಮತ್ತೊಮ್ಮೆ ಪ್ರವಾಹಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಿಸಿದೆ.
#shivamogga