ಯಡಿಯೂರಪ್ಪಗೆ ಗುರುಬಸವ ಪ್ರಶಸ್ತಿ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಗುರುಬಸವ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಲಿಂಗೈಕ್ಯ ಗುರುಬಸವ ಮಹಾಸ್ವಾಮಿಗಳ 110 ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಯಡಿಯೂರಪ್ಪಗೆ ಪ್ರಶಸ್ತಿ ನೀಡಲಾಗಿದೆ.

ಬೆಕ್ಕಿನಕಲ್ಮಠದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮರುಘರಾಜೇಂದ್ರ ಮಹಾಸ್ವಾಮಿಗಳು ಗುರುಬಸವ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ  ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಗೂ ಸ್ವಾಮೀಜಿಗಳು ಭಾಗವಹಿಸಿದ್ದರು.