ಹೈಲೆಟ್ಸ್ :
ಮೂರು ದಿನ ಭಾರಿ ಮಳೆಯ ಮುನ್ಸೂಚನೆ
ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್
ಹವಾಮಾನ ಇಲಾಖೆಯಿಂದ ಮುನ್ಸೂಚನೆ
ಸೆಪ್ಟೆಂಬರ್ ೫ರಿಂದ ಭಾರಿ ಮಳೆ ಸಾಧ್ಯತೆ
ಶಿವಮೊಗ್ಗ : ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಜೋರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಶಿವಮೊಗ್ಗ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೇನೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಳಲಿದ್ದು ಮೀನುಗಾರರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.