ಮಳೆರಾಯನಿಗೆ ನಡುಗಿದ ಸೊರಬ ಮಂದಿ 

ಸೊರಬ : ತಾಲೂಕಿನಲ್ಲಿ ಶುಕ್ರವಾರ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಮರಗಳು, ಕರೆಂಟ್ ಕಂಬಗಳು ನೆಲಕ್ಕೆ ಉರುಳಿದ್ದು, ಹಲವು ಕಡೆ ಜನಜೀವನ ಅಸ್ತವ್ಯಸ್ತವಾಗಿದೆ. ಸಾರ್ವಜನಿಕರ ಆಸ್ತಿಪಾಸಿಗೂ ಸಾಕಷ್ಟು ಹಾನಿಯಾಗಿದೆ.

ಉರುಗನಹಳ್ಳಿ ದೇವಸ್ಥಾನದ ಆವರಣದಲ್ಲಿದ್ದ ಕಹಿ ಇಲ್ಲದ ಬೇವಿನ ಮರ ಕೂಡ ಗಾಳಿಯ ರಭಸಕ್ಕೆ ಬುಡಮೇಲಾಗಿ ಬಿದ್ದಿದೆ. ಅಂಡಿಗೆ ಗ್ರಾಮದ ನವಚೇತನ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಹಾರಿಹೋಗಿದೆ. ಈ ಹಿನ್ನೆಲೆ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಹಾನಿಯಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ನಷ್ಟಕ್ಕೊಳಗಾದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.