ಶಿವಮೊಗ್ಗ : ಶಿವಮೊಗ್ಗದಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿದೆ. ಇಲ್ಲಿನ ಡಿವಿಎಸ್ ಕಾಲೇಜಿನ 15ಕ್ಕು ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗಳಿಗೆ ಹಾಜರಾಗಲು ನಿರಾಕರಿಸಿದ್ದಾರೆ.
ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ನಡೆದ ಹಿನ್ನೆಲೆ ಶಾಲೆ-ಕಾಲೇಜುಗಳು ಬಂದ್ ಆಗಿದ್ದವು. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಪುನಾರಂಭಗೊಂಡಿದೆ. ಆದರೆ ಹಿಜಾಬ್ ಧರಿಸದೆ ತರಗತಿಗೆ ಹಾಜರಾಗಲು ವಿದ್ಯಾರ್ಥಿನಿಯರು ನಿರಾಕರಿಸಿದ್ದಾರೆ. ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಡಿವಿಎಸ್ ಕಾಲೇಜಿನಲ್ಲಿ ಸಮವಸ್ತ್ರದೊಂದಿಗೆ ಕಾಲೇಜಿಗೆ ಬರುವಂತೆ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಸಂಬಂಧ ಕಾಲೇಜು ಗೇಟ್ ಮುಂಭಾಗ ನೋಟಿಸ್ ಕೂಡ ಅಂಟಿಸಲಾಗಿದೆ.