ಶಿವಮೊಗ್ಗ : ಭದ್ರಾವತಿಯ ವಿ.ಐ.ಎಸ್.ಎಸ್ ಮತ್ತು ಎಂ.ಪಿ.ಎಂ ಕಾರ್ಖಾನೆಗಳನ್ನು ತಕ್ಷಣ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಏಪ್ರಿಲ್ 11ರಂದು ಭದ್ರಾವತಿ ತಾಲೂಕು ಕಚೇರಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತ ಅಧ್ಯಕ್ಷ ಬಿ.ಎಲ್.ರಾಜು ತಿಳಿಸಿದರು.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಭದ್ರಾವತಿಯಲ್ಲಿನ ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸುತ್ತೇವೆ ಎಂದು ಭರವಸೆ ನೀಡದ್ದರು. ಆದರೆ ಈವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಕುರಿತು ಶೀಘ್ರವಾಗಿ ಕಾರ್ಯೋನ್ಮುಖವಾಗಬೇಕೆಂದು ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಮಾಹಿತಿ ನೀಡಿದರು.