ಶಿವಮೊಗ್ಗ : ನಾಡಿಗೆ ಬೆಳಕು ಕೊಟ್ಟ ನಾವು ಬಹಳ ಭೂಮಿಯನ್ನು ಕಳೆದುಕೊಂಡು ನೋವಿನಲ್ಲಿದ್ದೇವೆ. ಈ ಹಿನ್ನೆಲೆ ಶರಾವತಿ ಸಂಸ್ತ್ರಸ್ತರಿಗೆ ಭೂಮಿಹಕ್ಕು ನೀಡಬೇಕೆಂದು ಆಗ್ರಹಿಸಿ ಮಾರ್ಚ್ ೨೯ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಶರವಾತಿ ಹಿನ್ನೀರಿನ ಮುಳುಗಡೆ ರೈತರ ಸಂಘದ ಅಧ್ಯಕ್ಷ ಹೂವಪ್ಪ ಕೂಡಿ ತಿಳಿಸಿದರು.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 1962ರಿಂದ ನಮಗೆ ಭೂಮಿ ಹಕ್ಕು ಸಿಕ್ಕಿಲ್ಲ. ಸರ್ಕಾರ ಕೂಡಲೇ ನಮಗೆ ಭೂಮಿ ಹಕ್ಕು ಕೊಡಬೇಕು. ಇಲ್ಲ ಮುಳುಗಡೆಯಾಗಿರುವ ಜಾಗವನ್ನೇ ನಮಗೆ ಬಿಟ್ಟುಕೊಡಬೇಕು. ಮುಳುಗಡೆ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡಬೇಕು ಹಾಗೂ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಮಾರ್ಚ್ 29ರಂದು ಆಲ್ಕೋಳ ವೃತ್ತದಿಂದ ಪ್ರತಿಭಟನಾ ರ್‍ಯಾಲಿ ಆರಂಭವಾಗಿ ಅಶೋಕ ವೃತ್ತ, ಅಮೀರ್ ಅಹಮದ್ ವೃತ್ತದ, ಗೋಪಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಮಾಧ್ಯಮಗೊಷ್ಠಿಯಲ್ಲಿ ಪ್ರಮುಖರಾದ ನಾಗರಾಜ್.ಎಂ.ಡಿ, ಕೆ.ಎಂ.ಅಶೋಕ್, ಶಿವಾನಂದ ಉಪಸ್ಥಿತರಿದ್ದರು.