ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ತಮ್ಮ ಆಡಳಿತ ಅವಧಿಯಲ್ಲಿ ಕೈಗೊಂಡ ಕಾರ್ಯಗಳ ಕುರಿತಾಗಿ ಮಾಹಿತಿ ನೀಡದರು.
ಈ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡದ ಅವರು, ನನ್ನ ಅಧಿಕಾರದ ಅವಧಿಯಲ್ಲಿ ಕೆರೆ ಮತ್ತು ಪಾರ್ಕ್‌ಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿತ್ತು. ಹೀಗಾಗಿ ಶಿವಮೊಗ್ಗ ನಗರದಲ್ಲಿ ೧೩ ಕೆರೆಗಳ ಅಭಿವೃದ್ಧೆಗೆ ವ್ಯವಸ್ಥೆ ಮಾಡಲಾಗಿತ್ತು. ಇದರಲ್ಲಿ ಈಗಾಗಲೇ ೫ ಕೆರೆಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡದರು. ಇದೇ ರೀತಿಯಾಗಿ ತಮ್ಮ ಆಡಳಿತಾವಧಿಯಲ್ಲಾದ ಎಲ್ಲಾ ಕೆಲಸಗಳು ಹಾಗೂ ಇನ್ನೂ ಕಾಮಗಾರಿ ಹಂತದಲ್ಲಿರುವ ಯೋಜನೆಗಳ ಕುರಿತಾಗಿ ಮಾಹಿತಿ ನೀಡಿದರು.