ಶಿವಮೊಗ್ಗ : ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಈ ಕುರಿತಾಗಿ ಮಾತನಾಡಿದ ಸಚಿವರು, ಕಳೆದ ಬಾರಿ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಾವು ಮನವಿ ಮಾಡಿದ್ದೆವು. ಆದ್ರೆ ಡಿ ಲಿಮಿಟೇಶನ್ ಹಾಗೂ ಮೀಸಲಾತಿ ಸರಿಯಿಲ್ಲ ಎಂದು 780 ಆಕ್ಷೇಪಗಳು ಬಂದಿದ್ದವು. ಇದಕ್ಕಾಗಿ ಲಕ್ಷ್ಮಿನಾರಾಯಣ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನ ಮಾಡಲಾಗಿದೆ. ವರದಿ ಬಂದ ನಂತರ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.