ಶಿವಮೊಗ್ಗ : ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನೂತನ ಆರೋಗ್ಯ ಕೇಂದ್ರ ಉದ್ಘಾಟನೆಯಾಗಿದೆ. ನಿತ್ಯವೂ ನೂರಾರು ಜನ ನ್ಯಾಯಾಲಯಕ್ಕೆ ಬಂದು ಹೋಗುವುದರಿಂದ ಈ ಆರೋಗ್ಯ ಕೇಂದ್ರದ ಸ್ಥಾಪನೆಯಿಂದ ಸಾಕಷ್ಟು ಜನರಿಗೆ, ವಕೀಲರಿಗೆ ಅನುಕೂಲವಾಗಲಿದೆ.
ಈ ಕುರಿತು ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಾಫ ಹುಸೇನ್ ಎಸ್.ಎ., ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ದೇಶದ ಎಲ್ಲಾ ನ್ಯಾಯಾಲಯದಲ್ಲಿ ಈ ಸೌಕರ್ಯ ನೀಡಬೇಕು. ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ, ನಮ್ಮ ನ್ಯಾಯಾಲಯದ ಆವರಣದಲ್ಲಿ ಪ್ರಥಮ ಬಾರಿಗೆ ಈ ಆರೋಗ್ಯ ಕೇಂದ್ರವನ್ನ ಉದ್ಘಾಟನೆ ಮಾಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.