ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನೆ 

ಶಿವಮೊಗ್ಗ : ಇಲ್ಲಿನ ರೆಡ್ಡಿ ಬಡಾವಣೆಯಲ್ಲಿ ತಾಂಡ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ಸೇವಾ ಸಂಘದ ವತಿಯಿಂದ ನಿರ್ಮಾಣವಾಗಿರುವ ಶಿವಮೊಗ್ಗ ಜಿಲ್ಲಾ ಬಂಜಾರ ಮಹಿಳಾ ತರಬೇತಿ ಹಾಗೂ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಅಶೋಕ್ ನಾಯ್ಕ್ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ಧೀರಜ್ ಹೊನ್ನವಿಲೆ, ಮಲ್ಲೇಶಪ್ಪ, ತಾಂಡ ಅಭಿವೃದ್ಧಿ ನಿಗಮದ ನಿರ್ದೇಶಕ ಚಂದ್ರನಾಯ್ಕ್, ಜಿಲ್ಲಾ ಬಂಜಾರ ಮಹಿಳಾ ಸೇವಾ ಸಂಘದ ಅಧ್ಯಕ್ಷೆ ಸಾಕಮ್ಮ, ಮತ್ತಿತರರು ಉಪಸ್ಥಿತರಿದ್ದರು.