ಎಂ.ಪಿ.ರೇಣುಕಾಚಾರ್ಯರಿಂದ ರಸ್ತೆ ಕಾಮಗಾರಿ ಉದ್ಘಾಟನೆ 

ಹೊನ್ನಾಳಿ : ಕ್ಷೇತ್ರದ ನೆರಲಗುಂಡಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು. ಈ ಕಾಮಗಾರಿಗೆ ೩೮ ಲಕ್ಷ ಅನುದಾನ ಬಿಡುಗಡೆಯಾಗಿದೆ.

ಇನ್ನು ಇದೇ ಗ್ರಾಮದ ಕೆರೆ ಅಭಿವೃದ್ಧಿಗೆ 50 ಕೋಟೆ, ರಸ್ತೆ ಅಭಿವೃದ್ಧಿಗೆ 5 ಕೋಟಿ, ಹಾಗೂ ಗ್ರಾಮದ ಸುತ್ತಾಮುತ್ತಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 58 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿದಿನಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.