ಸೆಪ್ಟಂಬರ್ ೧೬ರಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ

ಹೈಲೆಟ್ಸ್ : 

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ
ಮಾದಕ ವಸ್ತು ವಿರೋಧಿ ಅಭಿಯಾನಕ್ಕೆ ಚಾಲನೆ 
ಸೆಪ್ಟಂಬರ್ ೧೬ರಂದು ನಡೆಯಲಿರುವ ಕಾರ್ಯಕ್ರಮ
ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ

ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ ಹಾಗೂ ಮಾದಕ ವಸ್ತು ವಿರೋಧಿ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಸೆಪ್ಟಂಬರ್ ೧೬ರಂದು ಆಯೋಜಿಸಲಾಗಿದೆ. ಬಾಲರಾಜ್ ರಸ್ತೆಯಲ್ಲಿನ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದ್ರು.

ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಚಿಂತಕ, ರಂಗಕರ್ಮಿ ಚರಕ ಪ್ರಸನ್ನ ನೆರವೇರಿಸಲಿದ್ದಾರೆ. ಮಾಧಕ ವಸ್ತು ವಿರೋಧಿ ಅಭಿಯಾನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಲಿದ್ದಾರೆ. ಹಾಗೇನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಉಪಸ್ಥಿತರಿರಲಿದ್ದಾರೆ ಎಂದರು.

ಇನ್ನು ಇದೇ ವೇಳೆ ಪತ್ರಕರ್ತರಿಗೆ ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ್ ಸರ್ಜಿಯವರು ಪತ್ರಕರ್ತರಿಗೆ ಹೆಲ್ತ್ ಕಾರ್ಡ್ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಮಾಧ್ಯಮಗೋಷ್ಟಿಯಲ್ಲಿ ಸಂಘದ ಗೌರವಾಧ್ಯಕ್ಷರಾದ ಎಸ್.ಚಂದ್ರಕಾಂತ್, ಉಪಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಕಾರ್ಯದರ್ಶಿ ಗೋ.ವ.ಮೋಹನಕೃಷ್ಣ ಹಾಗೂ ಖಜಾಂಚಿ ಶಿವಮೊಗ್ಗ ನಂದನ್ ಉಪಸ್ಥಿತರಿದ್ದರು.