ಏಪ್ರಿಲ್ 15ಕ್ಕೆ ಒಪನ್ ಮೈಂಡ್ ಶಾಲಾ ನೂತನ ಕಟ್ಟಡ ಉದ್ಘಾಟನೆ 

ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಪ್ರಯತ್ನ ಕೈಗೊಳ್ಳುವ, ಮಕ್ಕಳ ಕ್ರೀಯಾ ಶೀಲತೆಗೆ ಹೆಚ್ಚಿನ ಮಹತ್ವ ನೀಡುವ ಒಪನ್ ಮೈಂಡ್ಸ್ ಶಾಲೆಯ ನೂತನ ಕಟ್ಟಡ ನಿರ್ಮಾಣವಾಗಿದೆ. ಏಪ್ರಿಲ್ 15 ರಂದು ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಕಿರಣ್ ಕುಮಾರ್.ಕೆ ತಿಳಿಸಿದರು.

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾವಳ್ಳಿಯಲ್ಲಿ ನಿರ್ಮಾಣವಾಗಿರುವ ಶಾಲೆಯ ನೂತನ ಕಟ್ಟದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಲಿದ್ದಾರೆ. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ತರಳಬಾಳು ಜಗದ್ಗುರುಗಳಾದ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಸಂಸದರಾದ ಬಿ.ವೈ.ರಾಘವೇಂದ್ರ, ಜಿ.ಎಂ.ಸಿದ್ದೇಶ್ವರ ಹಾಗೂ ಮತ್ತಿತರ ಗಣ್ಯರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.