ಮತ್ತೊಂದು ಸುತ್ತಿನ ಲಸಿಕಾ ಅಭಿಯಾನ 

ದೆಹಲಿ : ಚೀನಾ, ಅಮೇರಿಕ, ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಈ ನಡುವೆ ಭಾರತ ಮತ್ತೊಂದು ಸುತ್ತಿನ ಲಸಿಕಾ ಅಭಿಯಾನಕ್ಕೆ ಮುಂದಾಗಿದೆ. ೧೮ ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಕ್ರಮವಾಗಿ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಆದ್ರೆ ಈ ಬೂಸ್ಟರ್ ಡೋಸ್ ಉಚಿತವಾಗಿ ನೀಡಲಾಗ್ತಾಯಿಲ್ಲ. ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗೆ ಸೇವಾ ಶುಲ್ಕವೂ ಸೇರಿ ೩೭೫ ರೂ ನಿಗದಿಪಡಿಸಲಾಗಿದೆ. ಸದ್ಯಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಈ ಹಿಂದೆ ಪಡೆದುಕೊಂಡಿದ್ದ ಲಸಿಕೆಯನ್ನೇ ಬೂಸ್ಟರ್ ಡೋಸ್ ವೇಳೆಯೂ ಪಡೆಯಬೇಕೆಂದು ಸರ್ಕಾರ ತಿಳಿಸಿದೆ.