ಭದ್ರಾವತಿ : ಇಲ್ಲಿನ ಅಂಡರ್ ಬ್ರಿಡ್ಜ್‌ನಿಂದ ಉಂಬ್ಳೆಬೈಲ್ ರಸ್ತೆಯ ಜಯಶ್ರಿ ವೃತ್ತ ಹಾಗೂ ಕೃಷ್ಣಪ್ಪ ಸರ್ಕಲ್‌ವರೆಗೂ ರಸ್ತೆ ಅಗಲವಾಗಿದೆ. ಹೀಗಾಗಿ ಇಲ್ಲಿ ವಾಹನ ಸವಾರರು ಅತೀ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದಾರೆ. ಆದ್ದರಿಂದ, ಈ ರಸ್ತೆಗೆ ಹಂಪ್ ಅಥವಾ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಬೇಕೆಂದು ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಪ್ರತಿಭಟನೆ ನಡೆಸಿದ್ದಾರೆ.
ಭದ್ರವಾತಿ ಲೋಕೋಪಯೋಗಿ ಬಂದರು ಹಾಗೂ ಒಳನಾಡು ಸಾರಿಗೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಶಶಿಕುಮಾರ್ ಗೌಡ, ವಾಹನ ಸವಾರರು ವಾಹನಗಳನ್ನು ಅತೀ ವೇಗವಾಗಿ ಚಾಲನೆ ಮಾಡುತ್ತಿರುವುದರಿಂದ ಶಾಲಾ ಮಕ್ಕಳು, ವಯೋವೃದ್ದರು, ಪಾದಾಚಾರಿಗಳಿಗೆ ರಸ್ತೆ ದಾಟಲು ಸಾಧ್ಯವಾಗುತ್ತಿಲ್ಲ. ಈ ರಸ್ತೆಯಲ್ಲಿ ವಾಹನ ದಟ್ಟಣೆಯೂ ಹೆಚ್ಚಿರುವುದರಿಂದ ಅಪಘಾತಗಳು ಹೆಚ್ಚಾಗಿವೆ.
ಆದ್ದರಿಂದ ಸಾರ್ವಜನಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಕೂಡಲೆ ರಸ್ತೆಗೆ ಹಂಪ್ ಅಥವಾ ಸ್ಪೀಡ್ ಬ್ರೇಕರ್ ಅಳವಡಿಸಬೇಕೆಂದು ಆಗ್ರಹಿಸಿ ಭದ್ರಾವತಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.