ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು 

ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಅಳವಡಿಸಲಾಗುತ್ತಿರುವ ನಾಮ ಫಲಕಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.

ಸ್ಮಾರ್ಟ್‌ಸಿಟಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಕರ್ನಾಟಕ ನಾಡು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದಿನೇಶ್.ಎಸ್.ಎಂ, ಕೋಟೆ ರಸ್ತೆಯಲ್ಲಿನ ಭೀಮೇಶ್ವರ ದೇವಸ್ಥಾನದಲ್ಲಿ ಅಳವಡಿಸಲಾಗಿರುವ ನಾಮಫಲಕಕ್ಕೆ ಆಂಗ್ಲ ಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಆದ್ದರಿಂದ ನಾಮ ಫಲಕಗಳಲ್ಲಿಯೂ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.