ಶಿವಮೊಗ್ಗ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಶಿವಮೊಗ್ಗದ ವಾರ್ತಾ ಇಲಾಖೆ ಕಚೇರಿಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಪತ್ರಕರ್ತರು ಮತ ಚಲಾಯಿಸುತ್ತಿದ್ದಾರೆ.
ಶಿಮಮೊಗ್ಗ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಘಟದ ಮೂರು ಉಪಾಧ್ಯಕ್ಷ ಸ್ಥಾನಗಳಿಗೆ ನಾಲ್ವರು ನಾಮಪತ್ರ ಸಲ್ಲಿಸಿದ್ದು, ಅತೀ ಹೆಚ್ಚು ಮತ ಪಡೆದ ಮೂವರು ಆಯ್ಕೆಯಾಗಲಿದ್ದಾರೆ. ಈ ಮೂರು ಸ್ಥಾನಗಳಿಗೆ ಮಾತ್ರ ಮತದಾನ ನಡೆಯುತ್ತಿದೆ.