ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ಸಹಾಯಕ ಪ್ರಾಧ್ಯಾಪಕ ನೇಮಕಾತಿಗಾಗಿ ನಡೆಸಿದ್ದ ಕನ್ನಡ ಐಚ್ಚಿಕ ಪರೀಕ್ಷೆಯಲ್ಲಿ ಹಲವು ತಪ್ಪುಗಳಿದ್ದವು. ಪ್ರಾಧಿಕಾರದ ಯಡವಟ್ಟಿನಿಂದ ಸಾಕಷ್ಟು ಪರಿಕ್ಷಾರ್ಥಿಗಳು ಗೊಂದಲಕ್ಕೀಡಾಗಿದ್ದರು. ಆದ್ದರಿಂದ ಕನ್ನಡ ಐಚ್ಚಿಕ ವಿಷಯಕ್ಕೆ ಮರು ಪರೀಕ್ಷೆ ನಡೆಸಬೇಕೆಂದು ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಯ ಆಕಾಂಕ್ಷಿಗಳ ಹೋರಾಟ ಸಮಿತಿ ಆಗ್ರಹಿಸಿದೆ.
ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯ ಕೂಡಲೇ ಕ್ರಮ ಕೈಗೊಳ್ಳಬೇಕು. ನಮಗೆ ಕೃಪಾಂಕಗಳು ಬೇಡ. ದಯಮೂಡಿ ಶೀಘ್ರವಾಗಿ ಮರು ಪರೀಕ್ಷೆ ನಡೆಸಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾನೂನಾತ್ಮಕ ಹೋರಾಟ ನಡೆಸುವ ಸಂದೇಶವನ್ನು ನೀಡಿದ್ದಾರೆ.