ಜಿಲ್ಲಾ ೨೦೨೨-೨೫ರ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ 

ಶಿವಮೊಗ್ಗ : ಜಿಲ್ಲಾ ೨೦೨೨-೨೫ರ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ ನಡೆಯಿತು. ಸಮಾರಂಭಕ್ಕೆ ಸಚಿವ ಈಶ್ವರಪ್ಪ ಚಾಲನೆ ನೀಡಿದರು.

ಸರ್ಕಾರಿ ನೌಕರರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೂತನವಾಗಿ ಆಯ್ಕೆಯಾಗಿರುವ ಸಂಘದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಸಂಸದ ಬಿ.ವೈ. ರಾಘವೇಂದ್ರ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಶಾಸಕ ಅಶೋಕ್‌ನಾಯ್ಕ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಭಾಗಿಯಾಗಿದ್ದರು.