ಶಿರಾಳಕೊಪ್ಪ : ಚುನಾವಣೆ ಬಂದಾಗ ಮಾತ್ರ ರಾಜಕಾರಣ ಮಾಡೋಣ. ಆದರೆ ಅಭಿವೃದ್ಧಿ ಕಾರ್ಯಗಳನ್ನು ದೇವರು ಮೆಚ್ಚೋಹಾಗೆ ಮಾಡೋಣ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಂಸದರು, ವ್ಯಾಪಾರ ಮಾಡುವುಕ್ಕಾಗಿ ಫುಡ್‌ಕೋರ್ಟ್ ನಿರ್ಮಾಣ ಮಾಡಿದ್ದೇವೆ. ಶಿರಾಳಕೊಪ್ಪದ 20 ಬೆಡ್ ಆಸ್ಪತ್ರೆಯನ್ನು 500ಕೋಟಿ ಅನುದಾನದಲ್ಲಿ 50 ಬೆಡ್ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. 50 ಕೋಟಿ ವೆಚ್ಚದಲ್ಲಿ ಅಕ್ಕಮಹಾದೇವಿ ಜನ್ಮಸ್ಥಳವಾದ ಉಡುತಡಿಯನ್ನು ಅಭಿವೃದ್ಧಿ ಮಾಡಲಾಗಿದೆ. ಇದೇ ರೀತಿ ನಾನಾ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದಾಗಿ ಹೇಳಿಕೊಂಡರು.