ಶಿವಮೊಗ್ಗ : ಇಲ್ಲಿನ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ್ ಅವರನ್ನ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕೆಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಕಳೆದ ಮೂರು ವರ್ಷಗಳಿಗೂ ಅಧಿಕ ಕಾಲದಿಂದ ಕರ್ತವ್ಯ ನಿರ್ವಹಿಸುತ್ತಿರುವ ನಾಗರಾಜು ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು. ಹಾಗೂ ಖಾಲಿ ಆಗುವ ಅವರ ಸ್ಥಾನಕ್ಕೆ ಸೂಕ್ತ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ಆದೇಶಿಸಲು ತಮ್ಮಲ್ಲಿ ಕೋರಲಾಗಿದೆ ಎಂದು ಕುಮಾರ್ ಬಂಗಾರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2021ರ ಡಿಸೆಂಬರ್‌ನಲ್ಲಿ ಬರೆದ ಈ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಓಡಾಡ್ತಾಯಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.