ಶಿಕ್ಷಣಕ್ಕೆ ಮಾತ್ರ ಹೆಚ್ಚಿನ ಒತ್ತು ನೀಡೋಣ : ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಶಿಕ್ಷಣದಲ್ಲಿ ಧರ್ಮ ಹಾಗೂ ರಾಜಕಾರಣವನ್ನ ಮಿಶ್ರಣ ಮಾಡಬಾರದು. ಒಂದು ವೇಳೆ ಇವುಗಳನ್ನ ಮಿಶ್ರಣ ಮಾಡಿದರೆ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯ ಹಾಳಾಗುತ್ತದೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಹಿಜಾಬ್-ಕೇಸರಿ ಶಾಲು ಸಂಘರ್ಷದಿಂದ ಬಂದ್ ಆಗಿದ್ದ ಶಾಲೆಗಳು ಪುನರ್ ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಹೊನ್ನಾಳಿ ನಗರದ ಟಿಬಿ ವೃತ್ತದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಶಾಸಕರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು ಶಾಲೆಯಲ್ಲಿ ಎಲ್ಲರೂ ಕೂಡ ಸಾಮರಸ್ಯದಿಂದ ಇರುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡರು.