ಹೈಲೆಟ್ಸ್ :
ನಮಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ನೀಡಿ
ಸ್ಥಳೀಯ ಸಂಸ್ಥೆ ಅಧಿಕಾರಿಗಳು, ನೌಕರರು, ಪೌರ ಕಾರ್ಮಿಕರ ಆಗ್ರಹ
ಪಾಲಿಕೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ
ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಕೆ
ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದವರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರ ಹಾಗೂ ಪೌರ ಕಾರ್ಮಿಕರಿಗೂ ನೀಡಬೇಕೆಂದು ಆಗ್ರಹಿಸಿ ರಾಜ್ಯ ಮಹಾನಗರ ಪಾಲಿಕೆಗಳ ಅಧಿಕಾರಿಗಳು ಮತ್ತು ನೌಕರರ ಸಂಘ ಪ್ರತಿಭಟನೆ ನಡೆಸಿದೆ.
ಬಳಿಕ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸದರು. ಪ್ರತಿಭಟನಾಕಾರರು ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನೆಡಿಸಿದರು. ಪ್ರತಿಭಟನೆ ಮೆರವಣಿಗೆಯಲ್ಲಿ ಸಂಘದ ಅಧ್ಯಕ್ಷ ಎಂ.ಮಾರಪ್ಪ, ಉಪಾಧ್ಯಕ್ಷ ವೇಣುಗೋಲ್ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದರು.