ಶಿವಮೊಗ್ಗ : ಮಲ್ಲಿಗೇನಹಳ್ಳಿ ವಾಜಪೇಯಿ ಬಡಾವಣೆಯಲ್ಲಿ ಕೆರೆಹಬ್ಬ ಹಾಗೂ ತುಳಸಿ ಗೌಡ ಉದ್ಯಾನವನದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ನಮ್ಮ ಶಿವಮೊಗ್ಗ ಪರಿಸರಾಸಕ್ತರ ತಂಡದಿಂದ ನಿರ್ಮಿಸಲಾದ ಈ ಉದ್ಯಾನವನದ ಉದ್ಘಾಟನೆಯನ್ನ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನೆರವೇರಿಸಿಕೊಟ್ಟರು.
ಈ ವೇಳೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಬಸವಕೇಂದ್ರದ ಶ್ರೀ ಬಸವಮರುಳಸಿದ್ಧ ಸ್ವಾಮೀಜಿ, ಮೂಲೆಗದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ, ಪ್ರೊಪೇಸರ್ ಕುಮಾರಸ್ವಾಮಿ ಹಾಗೂ ಲಕ್ಷ್ಮೀ ನಾರಾಯಣ ಕಾಶಿ ಉಪಸ್ಥಿತರಿದ್ದರು.