ಶಿವಮೊಗ್ಗ : ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮದ್ ಪೈಗಂಬರ್ ಕುರಿತಾಗಿ ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮ ನೀಡಿರುವ ಅವಹೇಳನಕಾರಿ ಹೇಳಿಕೆಗೆ ದೇಶ ಮಾತ್ರವಲ್ಲ ಇತರ ಇಸ್ಲಾಂ ರಾಷ್ಟ್ರಗಳಲ್ಲಿಯೂ ಆಕ್ರೋಶ ವ್ಯಕ್ತವಾಗುತ್ತದೆ.
ಈ ಹಿನ್ನೆಲೆ ಶಿವಮೊಗ್ಗದಲ್ಲಿಯೂ ನೂಪರ್ ಶರ್ಮರನ್ನು ಬಂಧಿಸುವಂತೆ ಮರ್ಕಜಿ ಸುನ್ನಿ ಜಮೈತುಲ್ ಉಲ್ಮಾ ಕಮಿಟಿ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ನಗರದ ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ, ನುಪುರ್ ಶರ್ಮ ಹೇಳಿಕೆಯಿಂದ ದೇಶದ ಗೌರವ, ರಾಷ್ಟ್ರದ ಸೌರ್ಹಾದತೆ, ಐಕ್ಯತೆಯನ್ನು ಹಾಳುಮಾಡಿದ್ದಾರೆ.
ಹೀಗಾಗಿ ನೂಪುರ್ ಶರ್ಮ ಹಾಗೂ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ನವೀನ್ ಕುಮಾರ್ ಜಿಂದಾಲ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಹಾಗೇನೆ ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.