ಮಕ್ಕಳಿಗೆ ಜಾಗೃತಿ ಮೂಡಿಸಿದ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಹೊನ್ನಾಳಿಯಲ್ಲಿನ ವಸತಿ ಶಾಲೆಗಳಲ್ಲಿ ಕರೋನ ಪಾಸಿಟೀವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಶಾಸಕ ಎಂ.ಪಿ.ರೇಣುಕಾಚಾರ್ಯ, ಕೆಂಚಿಕೊಪ್ಪ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಕೋವಿಡ್ ಕುರಿತು ಜಾಗೃತಿ ಮೂಡಿಸಿದರು. ಆರೋಗ್ಯ ಹಾಗೂ ಶಿಕ್ಷಣ ಎರಡೂ ಬಹಳ ಮುಖ್ಯ. ಹೀಗಾಗಿ ತಪ್ಪದೇ ಮಾಸ್ಕ್ ಹಾಕಬೇಕು. ಒಂದು ಡೆಸ್ಕ್ ಅಲ್ಲಿ ಇಬ್ಬರು ಮಾತ್ರ ಕುಳಿತುಕೊಳ್ಳಬೇಕು ಹಾಗೂ ಕರೋನ ಕುರಿತು ಜಾಗೃತರಾಗಿರಬೇಕು ಎಂದು ಹೇಳಿದರು.