ಮಹಾಭಾರತ ಪ್ರವಚನ ಸಪ್ತಾಹ ಕಾರ್ಯಕ್ರಮ

ಶಿವಮೊಗ್ಗ :  ಶಿವಮೊಗ್ಗದ ಅರ್ಚಕ ವೃಂದ, ವಾಸವಿ ವಿದ್ಯಾಲಯ, ಸಂಸ್ಕೃತ ಭಾರತಿ ಹಾಗೂ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಹಾಭಾರತ ಪ್ರವಚನ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾರ್ಯಕ್ರಮದ ಆಯೋಜಕರು ಡಿಸೆಂಬರ್ ೨೩ರಿಂದ ೨೯ರವರೆಗೆ ಶಿವಮೊಗ್ಗದ ರವೀಂದ್ರ ನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಮಹಾಭಾರತ ಪ್ರವಚನ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸಿ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.