ವಿದ್ಯಾಭ್ಯಾಸಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಿ  

ಸೊರಬ : ಯದ್ಧಪೀಡಿತ ಉಕ್ರೇನ್‌ನಿಂದ ಸೊರಬದ ಅಭೀಶ್ ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭೀಶ್, ಕುಟುಂಬ ಸಮೇತವಾಗಿ ಮಧು ಬಂಗಾರಪ್ಪ ಮನೆಗೆ ಭೇಟಿ ನೀಡಿ ಸಂತಸ ಹಂಚಿಕೊಂಡರು.

ಉಕ್ರೇನ್‌ನಿಂದ ಭಾರತಕ್ಕೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸ ಹೇಗೆ ಎಂಬ ಪ್ರಶ್ನೆ ಮೂಡಿದೆ. ಯುದ್ಧ ಯಾವಾಗ ಅಂತ್ಯವಾಗುತ್ತೋ ಗೊತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಇದೇ ವಿಚಾರವನ್ನು ಅಭೀಶ್ ಕೂಡ ಮಧು ಬಂಗಾರಪ್ಪ ಬಳಿ ಪ್ರಸ್ತಾಪಿಸಿ, ಶಿಕ್ಷಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಕೇಳಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.