ಶಿವಮೊಗ್ಗ: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಸಿವಿಲ್ ಕಾಮಗಾರಿಗಳನ್ನು ನಿರ್ವಹಣೆ ಮಾಡುವುದು ತುಂಬಾ ಕಷ್ಟವಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಇವತ್ತಿನ ಮಾರುಕಟ್ಟೆ ದರದಲ್ಲಿ ಸಾಮಗ್ರಿಗಳನ್ನು ಕೊಂಡು ಸಿವಿಲ್ ಕಾಮಗಾರಿಗಳನ್ನು ಮಾಡಲು ಆಗುತ್ತಿಲ್ಲ. ಮೇಸ್ತಿç ಕೂಲಿ ಕೂಡ ದುಬಾರಿಯಾಗಿದೆ. ಇದರಿಂದ ಟೆಂಡರ್ ಪಡೆದ ಗುತ್ತಿಗೆದಾರ ಸರಿಯಾದ ಸಮಯಕ್ಕೆ ಕಾಮಗಾರಿ ನಿರ್ವಹಣೆ ಮಾಡಲಾಗದೆ ನಷ್ಟ ಅನುಭವಿಸುವಂತಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಸಂಘ ಅಳಲು ತೋಡಿಕೊಂಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು, ಲೈಸೆನ್ಸ್ ಕೂಡ ನವೀಕರಣ ಮಾಡಲಾಗುತ್ತಿಲ್ಲ. ಸರ್ಕಾರ ಪ್ರತೀ ವರ್ಷ ಎಸ್‌ಆರ್ ದರವನ್ನು ಶೇಕಡಾ ೧೫ರಿಂದ ೨೦ರಷ್ಟು ಹೆಚ್ಚು ಮಾಡಬೇಕು. ಆದರೆ ೨೦೧೭ರಲ್ಲಿ ಮಾಡಿದ್ದು ಬಿಟ್ಟರೆ ಇದುವರೆಗೂ ಮಾಡಿಲ್ಲ. ಈ ಸಂಬAಧ ಪಿಡಬ್ಲುಡಿ, ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ. ಕಳೆದ ಅಧಿವೇಶನದಲ್ಲಿ ಚರ್ಚೆ ಮಾಡಿ ಕ್ರಮ ಕೈಗೊಳ್ಳೋದಾಗಿ ಸಚಿವರು ಭರವಸೆ ನೀಡಿದ್ರು. ಆದ್ರೆ ಅದ್ಯಾವುದೂ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.