ಮೇ 20ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ 

ಶಿವಮೊಗ್ಗ :  ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಲ್ಲಿ ಸರ್ಕಾರವು ವಿಳಂಬ ನೀತಿ ಅನುಸರಿಸುತ್ತಿದೆ. ಆದ್ದರಿಂದ ರಾಜ್ಯದ್ಯಂತ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಸ್ವಾಭಿಮಾನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಳ ಮೀಸಲಾತಿ ಹೆಚ್ಚಳ ಹೋರಾಟ ಕ್ರೀಯಾ ಸಮಿತಿ ಮುಂದಾಗಿದೆ.

ವಾಲ್ಮೀಕಿ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ನೀಡಬೇಕು. ಈ ಸಂಬಂಧ ವಾಲ್ಮೀಕಿ ರಾಜನಹಳ್ಳಿ ಗುರು ಪೀಠದ ಸ್ವಾಮೀಜಿಗಳು ಕಳೆದ ೯೫ ದಿನದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೂ ಕೂಡ ಸರ್ಕಾರ ಆ ಕಡೆ ತಿರುಗಿಯೂ ನೋಡದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಶಿವಮೊಗ್ಗದಲ್ಲಿಯೂ ಮೇ 20ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.