ಶಿವಮೊಗ್ಗ : ಮೇ 16 ರಿಂದ 22 ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಮಿನಿ ಒಲಂಪಿಕ್ಸ್ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದ ಬಾಕ್ಸಿಂಗ್ ವಿಭಾಗದಲ್ಲಿ ಶಿವಮೊಗ್ಗದ 4 ವಿದ್ಯಾರ್ಥಿ ಕ್ರೀಡಾಪಟುಗಳು ಪದಕ ಗೆದ್ದಿದ್ದಾರೆ.
ಜಿಲ್ಲೆಯಿಂದ ಒಟ್ಟು ಐದು ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪದಕ ವಿಜೇತ ಕ್ರೀಡಾಪಟುಗಳಿಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಮ್ಮ ನೂತನ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಿದರು. ಮುಂದೆಯೂ ಇದಕ್ಕಿಂತ ಹೆಚ್ಚಿನ ಸಾಧನೆ ಮಾಡುವಂತೆ ಮಕ್ಕಳಿಗೆ ಪ್ರೋತ್ಸಾಹ ನೀಡಿದರು.