ಶಿವಮೊಗ್ಗ : ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಜಕಣಾಚಾರಿಯವರ ಭಾವಚಿತ್ರಕ್ಕೆ ಪುಷ್ಪ ನಮಗಳನ್ನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಶಿಲ್ಪಕಲೆಗೆ ಇನ್ನೊಂದು ಹೆಸರೇ ಜಕಣಾಚಾರಿ. ಹೀಗಾಗಿಯೇ ಅವರನ್ನ ಅಮರ ಶಿಲ್ಪಿ ಎಂದು ಕರೆಯಲಾಗುತ್ತೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಭದ್ರ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಕೆ.ಈ. ಕಾಂತೇಶ್, ಜಿಲ್ಲಾ ವಿಶ್ವಬ್ರಾಹ್ಮಣ ಸಂಘದ ಅಧ್ಯಕ್ಷ ಎನ್.ಸೋಮಾಚಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.