ಹೊಳಲೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಹೊಳಲೂರು ಗ್ರಾಮ ಪಂಚಾಯತಿ ಭೇಟಿ ರದ್ದಾಗಿದೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಪ್ರಧಾನಿ ಬದಲಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸುವ ಸಾಧ್ಯತೆಯಿದೆ.
ಏಪ್ರಿಲ್ 24 ರಂದು ಮೋದಿ ಹೊಳಲೂರು ಗ್ರಾಮಪಂಚಾಯಿತಿಗೆ ಭೇಟಿ ನೀಡಬೇಕಿತ್ತು. ಆದರೆ ಅದೇ ದಿನ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುವುದು ನಿಶ್ಚಿತವಾಗಿದೆ. ಹೀಗಾಗಿ ಮೋದಿ ಹೊಳಲೂರಿಗೆ ಬರ್‍ತಾಯಿಲ್ಲ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪ್ರಧಾನಿ ಆಗಮನಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಹೊಳಲೂರಿನಲ್ಲಿ ಮಾಡಿಕೊಳ್ಳಲಾಗುತ್ತಿತ್ತು. ಕಾರ್ಯಕ್ರಮಕ್ಕಾಗಿ 15ಎಕರೆಯಷ್ಟು ಜಾಗದಲ್ಲಿ ವೇದಿಕೆ ಹಾಗೂ ಕೆಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿತ್ತು.